ADVERTISEMENT

ಲಿಂಕ್ ಕೆನಾಲ್ ಹೋರಾಟಕ್ಕೆ ಮಧುಗಿರಿ ತಾಲ್ಲೂಕಿನಿಂದ 500 ರೈತರು

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:22 IST
Last Updated 29 ಮೇ 2025, 14:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಮಧುಗಿರಿ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ವಿರೋಧಿಸಿ ನಡೆಯುವ ಬೃಹತ್ ಪ್ರತಿಭಟನೆಗೆ ತಾಲ್ಲೂಕಿನಿಂದ 500ಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಶಂಕರಪ್ಪ ತಿಳಿಸಿದರು.

ADVERTISEMENT

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಬ್ಬಿ ತಾಲ್ಲೂಕಿನ ಸುಂಕಾಪುರ ಗ್ರಾಮದಿಂದ ಮೇ 31ರಂದು ಬೆಳಿಗ್ಗೆ 10 ಗಂಟೆಯಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಕಾಲುವೆಯನ್ನು ಜೆಸಿಬಿ ಮೂಲಕ ಮುಚ್ಚಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಮ್ಮ ಜಿಲ್ಲೆಯ ಭಾಗದ ನೀರನ್ನು ಕಸಿದುಕೊಂಡು ಹೋಗುತ್ತಿದ್ದಾರೆ ಎಂದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಹನುಮಂತರೆಡ್ಡಿ ಮಾತನಾಡಿ, ಮಾಗಡಿ ಲಿಂಕ್ ಕೆನಾಲ್ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಹಟಕ್ಕೆ ಬಿದ್ದಿದ್ದಾರೆ. ಇಬ್ಬರು ಸಚಿವರು ಜಾಣ್ಮೆ ನಡೆ ಅನುಸರಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ರೈತರ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ರೈತ ಸಂಘದ ಹೋರಾಟಕ್ಕೆ ತಾಲ್ಲೂಕು ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

ರೈತ ಮುಖಂಡರಾದ ದೊಡ್ಡಮಾಳಯ್ಯ, ನಾಗರಾಜು, ಭಾಗ್ಯಮ್ಮ, ನಾಗರತ್ನಮ್ಮ, ರಮೇಶ್, ಜಯರಾಮ್, ಮೂಡ್ಲಗಿರಿಯಪ್ಪ, ತಿಮ್ಮಯ್ಯ, ಚಿತ್ತಯ್ಯ, ನರಸಿಂಹಮೂರ್ತಿ, ಜಯರಾಮಯ್ಯ ಸೀತಾರಾಮ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.