ADVERTISEMENT

ಸೌಲಭ್ಯ ಕೊರತೆ ಇದ್ದರೂ ಉತ್ತಮ ಸೇವೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 7:20 IST
Last Updated 29 ಜನವರಿ 2018, 7:20 IST

ಹುಳಿಯಾರು: ‘ಕೆಲ ಸೌಲಭ್ಯಗಳ ಕೊರತೆ ನಡುವೆಯೂ ಸರ್ಕಾರಿ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ‘ ಎಂದು ಸಿಆರ್‌ಪಿ ದಯಾನಂದ್ ತಿಳಿಸಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮುದಾಯ ಹಾಗೂ ಪೋಷಕರು ಸರ್ಕಾರಿ ಶಾಲೆಗಳ ಕಡೆ ಗಮನಹರಿಸದರೆ ಉತ್ತಮವಾಗಿ ನಡೆಯುತ್ತವೆ’ಎಂದರು. ಎಂಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಶಂಕರಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ

ಕೆಲ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಹಣ ವ್ಯಯ ಮಾಡಿಕೊಳ್ಳುತ್ತಾರೆ’ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್, ಸದಸ್ಯರಾದ ಲಕ್ಷ್ಮಿದೇವಿ, ಗಾಯಿತ್ರಮ್ಮ , ಮಣಿ ಇದ್ದರು. ಶಾಲೆ ಮತ್ತು ಮಕ್ಕಳ ಮನೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.