ತುಮಕೂರು: ಕೊರೊನಾ ಸೋಂಕು ಹರಡುವುದು ಹೆಚ್ಚುತ್ತಲೇ ಇದ್ದು, ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವರ ಸಂಖ್ಯೆಯಲ್ಲೂ ಏರಿಕೆ ಯಾಗಿದೆ.
ಸೋಮವಾರದವರೆಗೆ 596 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ದಿನದಲ್ಲಿ 62 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ 25,441 ಜನರಿಗೆ ಸೋಂಕು ತಗುಲಿದೆ. ತುಮಕೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 45 ಮಂದಿಗೆ ಸೋಂಕು ತಗುಲಿದೆ. ಕುಣಿಗಲ್ 5, ಶಿರಾ 5, ಕೊರಟಗೆರೆ, ತುರುವೇಕೆರೆಯಲ್ಲಿ ತಲಾ ಇಬ್ಬರಿಗೆ ಸೋಂಕು ಖಚಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.