ತುಮಕೂರು: ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ 6 ಜನ ಕೊಚ್ಚಿಕೊಂಡು ಹೋಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗೆ ಹುಡುಕಾಟ ನಡೆದಿದೆ.
ತುಮಕೂರು ನಗರದ ಬಿ.ಜಿ.ಪಾಳ್ಯದ ಸಾಜಿಯಾ, ಅರ್ಬಿನ್ ಮೃತದೇಹ ಸಿಕ್ಕಿದೆ. ತಬಾಸುಮ್ (45), ಶಬಾನ (44), ಮಿಫ್ರಾ (4), ಮಹಿಬ್ (1) ಕೊಚ್ಚಿಕೊಂಡು ಹೋಗಿದ್ದಾರೆ. ಇವರ ಜತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಲಾಶಯದ ಹಿನ್ನೀರಿನ ಕಾಲುವೆಗೆ ಇಳಿದಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮೃತರು ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಹೋಗಿದ್ದರು. ಊಟ ಮುಗಿಸಿಕೊಂಡು ಜಲಾಶಯಕ್ಕೆ ತೆರಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.