ತುಮಕೂರು: ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ತುರುವೇಕೆರೆ ತಾಲ್ಲೂಕು ದೊಡ್ಡಗಟ್ಟ ಗ್ರಾಮದ ರೈತ ಡಿ.ಜಿ.ಮಲ್ಲಿಕಾರ್ಜುನ ಎಂಬುವರಿಗೆ ₹8.27 ಲಕ್ಷ ವಂಚಿಸಲಾಗಿದೆ.
ಪ್ರದೀಪ್ ಎಂಬ ಹೆಸರಿನಲ್ಲಿ ಕರೆ ಮಾಡಿದ ವಂಚಕರು ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ₹14.50 ಲಕ್ಷ ಸಾಲ ನೀಡುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಮೊದಲು ₹80 ಸಾವಿರ ಹೂಡಿಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಅದರಂತೆ ಮಲ್ಲಿಕಾರ್ಜುನ ಹಣ ವರ್ಗಾಯಿಸಿದ್ದಾರೆ.
ನಂತರ ವಾಟ್ಸ್ ಆ್ಯಪ್ ಮುಖಾಂತರ ಕರೆ ಮಾಡಿ ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಕೋರಿದ್ದಾರೆ. ಹಂತ ಹಂತವಾಗಿ ಒಟ್ಟು ₹9.27 ಲಕ್ಷ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅವರಿಗೆ ₹1 ಲಕ್ಷ ಮಾತ್ರ ವಾಪಸ್ ಬಂದಿದೆ. ಸಾಲ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದವರನ್ನು ಪತ್ತೆ ಹಚ್ಚುವಂತೆ ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.