
ಪ್ರಜಾವಾಣಿ ವಾರ್ತೆಶಿರಾ: ರಾಷ್ಟ್ರೀಯ ಹೆದ್ದಾರಿ-48ರ ತರೂರು ಗೇಟ್ ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನೆಲಮಂಗಲ ಪಟ್ಟಣದ ಅರುಣ್ (35) ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಇನೋವಾ ಕಾರಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಅಪಘಾತ ಸಂಭವಿಸಿದೆ. ಅತಿವೇಗವಾಗಿ ತೆರಳುತ್ತಿದ್ದ ಕಾರು ವಾಹನವನ್ನು ಹಿಂದಕ್ಕೆ ಹಾಕಲು ಹೋಗಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಡಿವೈಂಡರ್ ಹಾರಿ ರಸ್ತೆಯ ಮತ್ತೊಂದು ಬದಿಗೆ ಬಿದ್ದಿದೆ. ಚಾಲನೆ ಮಾಡುತ್ತಿದ್ದ ಅರುಣ್ ಕಾರಿನಿಂದ ಕೆಳಗೆ ಬಿದ್ದು ಎದುರಿಗೆ ಬರುತ್ತಿದ್ದ ಲಾರಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ನೆಲಮಂಗಲದ ನರಹರಿ ಕುಲಕರ್ಣಿ ಗಾಯಗೊಂಡಿದ್ದು, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.