ADVERTISEMENT

ಅಪಘಾತ; ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 16:55 IST
Last Updated 14 ಅಕ್ಟೋಬರ್ 2019, 16:55 IST

ತುಮಕೂರು: ತಾಲ್ಲೂಕಿನ ಬೆಳ್ಳಾವಿ ಹತ್ತಿರ ಒಕ್ಕೋಡಿ ಸಮೀಪ ದ್ವಿಚಕ್ರವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಯತೀಶ್(30) ಎಂಬುವರು ಮೃತಪಟ್ಟಿದ್ದಾರೆ.

ಇವರು ತುಮಕೂರಿನ ಬಟವಾಡಿ ನಿವಾಸಿಯಾಗಿದ್ದು, ದ್ವಿಚಕ್ರವಾಹನದಲ್ಲಿ ಒಬ್ಬರೇ ಬೆಳ್ಳಾವಿ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದರು. ಅಪಘಾತ ಸಂಭವಿಸಿದಾಗ ತೀವ್ರವಾಗಿ ಗಾಯಗೊಂಡಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ.

ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.