ತುಮಕೂರು: ನಗರದ ಹೊರವಲಯದ ದಿಬ್ಬೂರು ಬಳಿಯ ರಿಂಗ್ ರಸ್ತೆಯಲ್ಲಿ ಸೋಮವಾರ ಆಟೊ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಐವರು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಾಪಾಯವಾಗಿಲ್ಲ.
ನಗರದ ದೀಕ್ಷಾ (9), ಭೂಮಿಕಾ (11), ಪವನ್‌ಕುಮಾರ್ (15), ಮಹಾಲಕ್ಷ್ಮಿ (11), ವಿನೋದ್‌ಕುಮಾರ್ (11) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ಗೇಟ್‌ನಿಂದ ಅಕ್ಕಿ ತುಂಬಿಕೊಂಡು ತಿಪಟೂರು ಕಡೆಗೆ ಹೊರಟಿದ್ದ ಲಾರಿ ಮತ್ತು ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಆಟೊ ಮಧ್ಯೆ ಅಪಘಾತ ಸಂಭವಿಸಿದೆ. ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.