ಶಿರಾ: ರಾಷ್ಟ್ರೀಯ ಹೆದ್ದಾರಿ- 48ರ ದೊಡ್ಡ ಆಲದಮರ ಸಮೀಪ ಗುರುವಾರ ಸಂಭವಿಸಿದ ಅಪಘಾತದಲ್ಲಿ ಉಮಾಪತಿಹಳ್ಳಿಯ ಜಲಂದರ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಲಂದರ್ ತನ್ನ ಪತ್ನಿಯ ಜೊತೆ ಶಿರಾದಿಂದ ದ್ವಿಚಕ್ರ ವಾಹನದಲ್ಲಿ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದಾಗ ತುಮಕೂರು ಕಡೆಯಿಂದ ಶಿರಾಕ್ಕೆ ತೆರಳುತ್ತಿದ್ದ ಲಾರಿಗೆ ಮತ್ತೊಂದು ಲಾರಿ ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದೆ ಹೋಗುತ್ತಿದ್ದ ಲಾರಿ ಸರ್ವಿಸ್ ರಸ್ತೆಗೆ ನುಗ್ಗಿ, ಎದುರಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಜಲಂದರ್ ಅವರಿಗೆ ಡಿಕ್ಕಿ ಹೊಡೆದಿದೆ. ಲಾರಿಯ ಕೆಳಗೆ ಸಿಕ್ಕಿ ಜಲಂದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.