ADVERTISEMENT

ತುಮಕೂರು: ಲಾರಿಗೆ ಕಾರ್‌ ಡಿಕ್ಕಿ, ಶಿಕ್ಷಕ ದಂಪತಿ ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2022, 9:09 IST
Last Updated 11 ಮೇ 2022, 9:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಶಿಕ್ಷಕ ದಂಪತಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಲ್ಲಸಂದ್ರ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಮೃತ ದಂಪತಿಯನ್ನುಈಶ್ವರಪ್ಪ(52), ಕಲ್ಪನಾ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇಬ್ಬರು ಗುಬ್ಬಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾಲ್ಲೂಕಿ ಹೆಗ್ಗೆರೆಯಲ್ಲಿ ವಾಸವಿದ್ದರು. ಬುಧವಾರ ಬೆಳಿಗ್ಗೆ ಹೆಗ್ಗೆರೆಯಿಂದ ಗುಬ್ಬಿಗೆ ತೆರಳುವಾಗ ಘಟನೆ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.