ADVERTISEMENT

ಅಪಘಾತ: ಲಾರಿ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 18 ಮೇ 2025, 15:31 IST
Last Updated 18 ಮೇ 2025, 15:31 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ತುಮಕೂರು: ತಾಲ್ಲೂಕಿನ ಬೊಮ್ಮನಹಳ್ಳಿ ಗೇಟ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಚಾಲಕ ಅನ್ವರ್‌ ಪಾಷ (64) ಎಂಬುವರು ಮೃತಪಟ್ಟಿದ್ದಾರೆ.

ತಮಿಳುನಾಡಿನ ಅನ್ವರ್‌ ಪಾಷ ಬೆಂಗಳೂರಿನಿಂದ ಕೊಲ್ಹಾಪುರದ ಕಡೆಗೆ ಹೊರಟಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.