ಸಾವು (ಪ್ರಾತಿನಿಧಿಕ ಚಿತ್ರ)
ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿ ಸೋಮವಾರ ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿ ಕೃಷ್ಣ (33) ಎಂಬುವರು ಮೃತಪಟ್ಟಿದ್ದಾರೆ.
ಕೃಷ್ಣ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನವರು. ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ರಜೆ ಇರುವುದರಿಂದ ಕುಟುಂಬದ ಜತೆ ಸ್ವಗ್ರಾಮಕ್ಕೆ ತೆರಳುತ್ತಿದ್ದಾರೆ. ಅವರೇ ಕಾರು ಚಲಾಯಿಸುತ್ತಿದ್ದರು.
ಬೆಳಗಿನ ಜಾವ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.