ಮಹಾಲಿಂಗಪುರ: ತುಮಕೂರಿನ ಸಮೀಪ ಗುರುವಾರ ರಾತ್ರಿ ಲಾರಿ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಜಮಖಂಡಿ, ಮುಧೋಳ ವಿಭಾಗದ ಕೆಪಿಟಿಸಿಎಲ್ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಶೇಖರ ಮಚ್ಚೇಂದ್ರ ನಡುವಿನಕೇರಿ (41) ಮೃತರಾಗಿದ್ದಾರೆ.
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ನಿವಾಸಿಯಾಗಿರುವ ಶೇಖರ ನಡುವಿನಕೇರಿ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತರಾಗಿದ್ದಾರೆ. ಘಟನೆಯಲ್ಲಿ ಹೆಸ್ಕಾಂನ ಮಹಾಲಿಂಗಪುರ ಶಾಖಾಧಿಕಾರಿ ರಾಜಕುಮಾರ ಸರಿಕಾರ, ಕಿರಿಯ ಅಭಿಯಂತರ ರಮೇಶ ಚಲವಾದಿ ಹಾಗೂ ಲೈನ್‌ಮನ್ ಮಹಾಂತೇಶ ಪೂಜಾರಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.