ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿ ಇಂದಿರಾನಗರ ಬಳಿ ಸೋಮವಾರ ರಾತ್ರಿ ದ್ವಿಚಕ್ರ ವಾಹನದಿಂದ ಬಿದ್ದು ಉಪನ್ಯಾಸಕ ರಂಗಾಪುರದ ಬಿ.ಎಂ. ಕೀರ್ತನ್ (29) ಮೃತಪಟ್ಟಿದ್ದಾರೆ.
ಕೀರ್ತನ್ ಶಿರಾದ ರಂಗನಾಥ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಶಿರಾದಿಂದ ಗ್ರಾಮಕ್ಕೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಾಯವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.