ADVERTISEMENT

ತಿಪಟೂರು: ಅಪಘಾತದಲ್ಲಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 1:41 IST
Last Updated 21 ಸೆಪ್ಟೆಂಬರ್ 2020, 1:41 IST
ತಿಪಟೂರು ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ಕಾರ್‌ ನಡುವೆ ಭಾನುವಾರ ಅಪಘಾತ ನಡೆಯಿತು
ತಿಪಟೂರು ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ಕಾರ್‌ ನಡುವೆ ಭಾನುವಾರ ಅಪಘಾತ ನಡೆಯಿತು   

ತಿಪಟೂರು: ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಕಲ್ವಾರಿ ಪ್ರಾರ್ಥನಾ ಮಂದಿರದ ಮುಂಭಾಗ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ಕಾರ್‌ ಮುಖಾಮುಖಿಯಾಗಿ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಹುಳಿಯಾರು ವಾಸಿ ಪಾನಿಪುರಿ ಮಂಜಣ್ಣನ ಮಗ ಎಂ.ರಾಘವೇಂದ್ರ(23) ಹಾಗೂ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಗಟಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬೊಲೆರೋದಲ್ಲಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೊಲೆರೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ. ತಿಪಟೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.