ಕುಣಿಗಲ್: ಪಟ್ಟಣದ ರಾಜ್ಯ ಹೆದ್ದಾರಿ 33ರಲ್ಲಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯ ಚೇತನ್ (38), ಕೋಟೆ ಪ್ರದೇಶದ ಕಿರಣ್ (20)ಎಂದು ಗುರುತಿಸಲಾಗಿದೆ.
ಇಬ್ಬರು ಹುಲಿಯೂರುದುರ್ಗದ ಕಡೆ ಹೋಗುವಾಗ ಎದುರುಗಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಚೇತನ್ ಸ್ಥಳದಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕಿರಣ್ ಚುಂಚನಗಿರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.