ADVERTISEMENT

ತುಮಕೂರು | ಅಂತರ ಕಾಯ್ದುಕೊಳ್ಳದ ಅಂಗಡಿ ವಿರುದ್ಧ ಕ್ರಮ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 16:53 IST
Last Updated 30 ಜೂನ್ 2020, 16:53 IST

ತುಮಕೂರು: ಗ್ರಾಹಕರಿಗೆ ಅಗತ್ಯ ಸಾಮಗ್ರಿ ವಿತರಣೆ ಮಾಡುವ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಎಚ್ಚರಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕಡ್ಡಾಯ. ಮಾಸ್ಕ್ ಧರಿಸದೇ ಓಡಾಡುವವರಿಗೆ ಪೊಲೀಸ್, ಪಂಚಾಯಿತಿಗಳ ಮುಖಾಂತರ ದಂಡ ವಿಧಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಸರ್ಕಾರ ಕೋವಿಡ್–19 ಚಿಕಿತ್ಸಾ ದರವನ್ನು ನಿಗದಿಪಡಿಸಿರುವುದರಿಂದ ಸೋಂಕಿತರು ಇಚ್ಚಿಸಿದ್ದಲ್ಲಿ ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಪಡೆಯಬಹುದಾಗಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿರುವ ಲ್ಯಾಬ್‌ನಲ್ಲಿ ಪ್ರತಿದಿನ ಸರಾಸರಿ 300ಕ್ಕೂ ಹೆಚ್ಚು ಮಂದಿಯ ಗಂಟಲು ದ್ರವ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶೇ 40ಕ್ಕೂ ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ. ಇದಕ್ಕೆ ಸರ್ಕಾರ ಕೂಡಾ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.