ADVERTISEMENT

ಪೌಷ್ಟಿಕ ಆಹಾರ ಸೇವನೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 5:09 IST
Last Updated 1 ಅಕ್ಟೋಬರ್ 2021, 5:09 IST
ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಪೋಷಣ್ ಮಾಸಾಚರಣೆ ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್. ಚಂದನ್, ಪ್ರಧಾನ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್, ವಕೀಲರ ಸಂಘದ ಅಧ್ಯಕ್ಷ ಕೆ.ಆರ್. ದಯಾನಂದ್, ಕೊನೆಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ರೂಪಾ ಬಿ. ಪಾಟೀಲ್ ಹಾಜರಿದ್ದರು

ತಿಪಟೂರು: ಕುಟುಂಬದ ಎಲ್ಲರ ಸೌಖ್ಯವನ್ನು ಬಯಸುವ ಮಹಿಳೆಯರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿವಹಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ತಿಳಿಸಿದರು.

ನಗರದ ಆರ್ಯ ಬಾಲಿಕಾ ಶಾಲೆಯಲ್ಲಿ ಮಂಗಳವಾರ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಯೋಜನಾಭಿವೃದ್ಧಿ ಯೋಜನೆಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ನಡೆದ ಪೋಷಣ್ ಮಾಸಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಂದು ಮನೆಯಲ್ಲಿಯೂ ಎಲ್ಲಾ ಸದಸ್ಯರ ಆರೈಕೆ ನೋಡಿಕೊಳ್ಳುವವರು ಮಹಿಳೆಯರೇ. ಅವರ ಆರೋಗ್ಯವನ್ನು ಲೆಕ್ಕಿಸದೇ ಕುಟುಂಬಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿರುತ್ತಾರೆ. ಅಂತಹ ಮಹಿಳೆಯರಿಗೆ ಆರೋಗ್ಯದಲ್ಲಿ ಸ್ಥಿರತೆ ಇರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು’ ಎಂದರು.

ADVERTISEMENT

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್. ಚಂದನ್, ಕೊನೆಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ರೂಪಾ ಬಿ. ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಕೆ.ಆರ್. ದಯಾನಂದ್, ಉಪಾಧ್ಯಕ್ಷ ಸುರಭೀದೇನು, ಕಾರ್ಯದರ್ಶಿ ಬಿ.ಎನ್. ಅಜಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.