ಕುಣಿಗಲ್: ಹಲವು ಅವಿಷ್ಕಾರಗಳ ಮೂಲವೇ ಶಿಕ್ಷಣ. ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಅಜ್ಞಾನದ ಕತ್ತಲೆಯಿಂದ ಹೊರಬರಬೇಕು. ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ತುಮಕೂರು ವಿವಿ ವಾಣಿಜ್ಯ ವಿಭಾಗದ ಅಧ್ಯಕ್ಷ ಡಾ.ಬಿ.ಶೇಖರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿದಿಸೆಯಲ್ಲಿ ಹಲವು ವಿಷಯಗಳನ್ನು ಅಧ್ಯಯನ ಮಾಡಿ, ಚಿಂತನಾಶಕ್ತಿ ವೃದ್ಧಿಸಿಕೊಳ್ಳಬೇಕು. ವಾಣಿಜ್ಯ, ಸೇವೆ, ವಿಮೆ, ಹಣಕಾಸು, ಕೈಗಾರಿಕೆ ಮತ್ತಿತರ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ವಾಣಿಜ್ಯ ಶಿಕ್ಷಣ ಪಡೆಯುವುದರ ಮೂಲಕ ಈ ಎಲ್ಲ ಕ್ಷೇತ್ರಗಳ ಜ್ಞಾನ ಪಡೆಯುವುದರ ಜೊತೆಗೆ ಕಾರ್ಪೋರೇಟ್ ಜಗತ್ತಿನ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳು, ದ್ವಿತೀಯ ಎಂ.ಕಾಂ. ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿದರು.
ಅಧ್ಯಾಪಕರಾದ ನಾರಾಯಣ ದಾಸ್, ಟಿ.ಎನ್.ನರಸಿಂಹಮೂರ್ತಿ, ಎನ್.ಟಿ.ಶ್ರೀನಿವಾಸ್, ರವೀಶ್, ಜಿ.ಎಸ್. ಹನುಮಂತಪ್ಪ, ಮಂಜುಸ್ವಾಮಿ, ಉಮ್ಮೆತಬಸ್ಸುಂ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.