ADVERTISEMENT

ಎಪಿಎಂಸಿ; ಎಲ್ಲರಿಗೂ ತೆರಿಗೆ ವಿನಾಯಿತಿ ನೀಡಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 10:09 IST
Last Updated 19 ಜುಲೈ 2020, 10:09 IST

ತುಮಕೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಅನುಸಾರ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವವರಿಗೆ ಶುಲ್ಕ ವಿನಾಯಿತಿ ನೀಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಎಚ್.ಜಿ. ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಎಪಿಎಂಸಿ ಹೊರಗೆ ಕೃಷಿ ಉತ್ಪನ್ನಗಳ ವ್ಯವಹಾರ ಮಾಡುವವರಿಗೆ ಶುಲ್ಕ ಇಲ್ಲ. ಪ್ರಾಂಗಣದ ಒಳಗೆ ಕೃಷಿ ಉತ್ಪನ್ನಗಳ ವ್ಯವಹಾರ ಮಾಡುವವರಿಗೆ ಶೇ 1ರಷ್ಟು ಎಪಿಎಂಸಿ ಶುಲ್ಕ ವಿಧಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಕಾರಣಕ್ಕೂ ಸರ್ಕಾರ ಎಲ್ಲರಿಗೂ ಶುಲ್ಕ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾನೂನು ಅಥವಾ ನಿಯಮಗಳು ಎಲ್ಲರಿಗೂ ಒಂದೇ ಇರಬೇಕು. ಎಪಿಎಂಸಿ ಪ್ರಾಂಗಣದಲ್ಲಿರುವ ವರ್ತಕರು ಸರ್ಕಾರದ ನಿಯಮದಡಿ ಪರವಾನಗಿ ಪಡೆದು ವ್ಯವಹರಿಸುತ್ತಾರೆ. ಅನುಮತಿ ಪಡೆದು ವ್ಯವಹರಿಸುವ ವರ್ತಕರು ಪ್ರಾಂಗಣದ ಹೊರಗೆ ವ್ಯವಹಾರ ನಡೆಸುವವರಿಗೆ ಪೈಪೋಟಿ ನೀಡಲು ಸಾಧ್ಯವಾಗದೆ ಆರ್ಥಿಕ ದುಸ್ಥಿತಿ ಎದುರಿಸಬೇಕಾದ ಸಂದರ್ಭ ಬರಬಹುದು. ಆದ್ದರಿಂದ ಎಲ್ಲರಿಗೂ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.