ಶಿರಾ: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಸದೃಢವಾಗಿದ್ದು, ಪಕ್ಷದ ಹೈಕಮಾಂಡ್ ನಿರ್ಣಯದಂತೆ ತುಮುಲ್ ಚುನಾವಣೆಯಲ್ಲಿ ಎಸ್.ಆರ್.ಗೌಡ ಅವರು ಜೆಡಿಎಸ್, ಬಿಜೆಪಿ (ಎನ್.ಡಿ.ಎ) ಮೈತ್ರಿಕೂಟದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ಅವರ ಗೆಲುವಿಗೆ ಎರಡು ಪಕ್ಷದ ಕಾರ್ಯಕರ್ತರು ಶ್ರಮಿಸುವಂತೆ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಹಾಗೂ ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್ ಮನವಿ ಮಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್- ಬಿಜೆಪಿ ಮೈತ್ರಿಕೂಟ ಹೈನುಗಾರಿಕೆ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ವ್ಯಕ್ತಿಯನ್ನು ಗುರ್ತಿಸಿ ಕಣಕ್ಕೆ ಇಳಿಸಿದರೆ ಕಾಂಗ್ರೆಸ್ ಪಕ್ಷ ಹೈನುಗಾರಿಕೆ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಯನ್ನು ಕಣಕ್ಕೆ ಇಳಿಸಿದೆ ಎಂದರು.
ಮೈತ್ರಿಕೂಟದ ಅಭ್ಯರ್ಥಿ ಎಸ್.ಆರ್.ಗೌಡ ಮಾತನಾಡಿ, ಹೈನುಗಾರಿಕೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ. ತಾಲ್ಲೂಕಿನಲ್ಲಿ ಬರದ ಪರಿಸ್ಥಿತಿ ಇದ್ದರೂ ಹಾಲು ಉತ್ಪಾದಕರ ಸಂಘ ಇರುವ ಗ್ರಾಮಗಳಲ್ಲಿ ಎಲ್ಲೂ ಸಹ ಬರ ಕಾಣಲಿಲ್ಲ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಹಾಲು ಉತ್ಪಾದಕರ ಸಂಘಗಳನ್ನು ಪ್ರಾರಂಭಿಸಿ ತಾಲ್ಲೂಕಿನಲ್ಲಿ ಕ್ಷೀರ ಕ್ರಾಂತಿ ಮಾಡಲಾಗುವುದು ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿ.ಪಂ ಮಾಜಿ ಉಪಾಧ್ಯಕ್ಷ ಮುಡಿಮಡು ರಂಗಶ್ವಾಮಯ್ಯ, ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್, ವಾಜರಹಳ್ಳಿ ನರಸಿಂಹೇಗೌಡ, ಟಿ.ಡಿ.ಮಲ್ಲೇಶ್, ರಹಮತ್ ವುಲ್ಲಾಖಾನ್, ಮದಲೂರು ನರಸಿಂಹಮೂರ್ತಿ, ಬರಗೂರು ಶಿವಕುಮಾರ್, ಮುದ್ದುಗಣೇಶ್, ಹೊಸಪಾಳ್ಯ ಸತ್ಯನಾರಾಯಣ, ಈರಣ್ಣ, ಹುಂಜನಾಳು ರಾಜಣ್ಣ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.