ADVERTISEMENT

ಚಿಕ್ಕನಾಯಕನಹಳ್ಳಿ: ಅಖಂಡ ಭಜನೆ ಆರಂಭ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 6:51 IST
Last Updated 31 ಮಾರ್ಚ್ 2023, 6:51 IST
ಶ್ರೀರಾಮ ನವಮಿ ಪ್ರಯುಕ್ತ ಗುರುವಾರ ಚಿಕ್ಕನಾಯಕನಹಳ್ಳಿಯ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು
ಶ್ರೀರಾಮ ನವಮಿ ಪ್ರಯುಕ್ತ ಗುರುವಾರ ಚಿಕ್ಕನಾಯಕನಹಳ್ಳಿಯ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು   

ಚಿಕ್ಕನಾಯಕನಹಳ್ಳಿ: ಶ್ರೀರಾಮ ನವಮಿ ಪ್ರಯುಕ್ತ ಪಟ್ಟಣ ಸೇರಿದಂತೆ ತಾಲ್ಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಕ್ತರಿಗೆ ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.

ಪಟ್ಟಣದ ಸುಪ್ರಸಿದ್ಧ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜೆಗಳು ನಡೆದವು. ದೇವಾಲಯದ ಆವರಣದಲ್ಲಿ ದೇವರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಭಕ್ತರು ಬೆಳಿಗ್ಗೆಯಿಂದಲೇ ದೇವರ ದರ್ಶನ ಪಡೆದರು.

ಜೋಗಿಹಳ್ಳಿಯ ಆದಿ ಹನುಮಂತ ರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ದೇವರ ಮೂರ್ತಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು.

ADVERTISEMENT

ತಿಪಟೂರು ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇಗುಲದಲ್ಲೂ ಭಕ್ತರಿಂದ ವಿಶೇಷ ಅಲಂಕಾರ, ಪೂಜೆ ನೆರವೇರಿತು. ದೇವಾಂಗ ಬೀದಿಯ ಬನಶಂಕರಿ ದೇವಾಲಯದಲ್ಲಿ ಶ್ರೀರಾಮನ ಚಿತ್ರಪಟವಿಟ್ಟು ಏಳು ದಿನಗಳ ಕಾಲ ಅಖಂಡ ಭಜನೆ ಆರಂಭವಾಯಿತು. ಭಜನೆ ಮಾಡುವವರಿಗೆ ದೇವಾಲಯದಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪಟ್ಟಣದ ನೆಹರೂ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್‌ನಿಂದ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಮಾರುತಿ ಆಟೊ ಚಾಲಕರ ಸಂಘದಿಂದ ಪಾನಕ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.