ADVERTISEMENT

ಮೈತ್ರಿ ಧರ್ಮ ಪಾಲನೆ ಅನಿವಾರ್ಯ, ಅವಶ್ಯ; ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2018, 19:11 IST
Last Updated 15 ಜುಲೈ 2018, 19:11 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಭಾನುವಾರ ಸಿದ್ಧಗಂಗಾಮಠದಲ್ಲಿ ಡಾ.ಶಿವಕುಮಾರಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಂಚಮಾರಯ್ಯ, ಮುಖಂಡರಾದ ಟಿ.ಎಸ್.ನಿರಂಜನ್, ಸೋಮಣ್ಣ ಇದ್ದರು
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಭಾನುವಾರ ಸಿದ್ಧಗಂಗಾಮಠದಲ್ಲಿ ಡಾ.ಶಿವಕುಮಾರಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಂಚಮಾರಯ್ಯ, ಮುಖಂಡರಾದ ಟಿ.ಎಸ್.ನಿರಂಜನ್, ಸೋಮಣ್ಣ ಇದ್ದರು   

ತುಮಕೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೈತ್ರಿ ಧರ್ಮವನ್ನು ಪಾಲಿಸುವುದು ಅನಿವಾರ್ಯ ಮತ್ತು ಅವಶ್ಯಕವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಭಾನುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. 'ಮೈತ್ರಿ ಸರ್ಕಾರದಲ್ಲಿ ಸಣ್ಣಪುಟ್ಟ ವಿಷಯಗಳಲ್ಲಿ ಅಭಿಪ್ರಾಯ ಬೇಧ ಬರುವುದು ಸಹಜ. ಮಾತುಕತೆಯ ಮೂಲಕವೇ ಬಗೆಹರಿಸಿಕೊಂಡ ಹೋಗಬೇಕಾಗುತ್ತದೆ' ಎಂದರು.

'ಮೈತ್ರಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಲಹೆ, ಮಾತಿಗೆ ಮನ್ನಣೆ ಇಲ್ಲ ಎಂಬುದು ಸರಿಯಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ಸಾರೆ. ಹೀಗಾಗಿ ಅವರಿಗೆ ಗೌರವ ಇದ್ದೇ ಇದೆ. ಅವರ ಸಲಹೆ ಕಡೆಗಣಿಸಲು ಸಾಧ್ಯವೇ ಇಲ್ಲ' ಎಂದು ಹೇಳಿದರು.

ADVERTISEMENT

ಲೋಕಸಭೆ ಚುನಾವಣೆಗೆ ಮೈತ್ರಿ: ‘ಲೋಕಸಭೆ ಚುನಾವಣೆಯನ್ನು ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡೇ ಎದುರಿಸಬೇಕೆ? ಬೇಡವೆ? ಎಂಬ ತೀರ್ಮಾನವನ್ನು ನಮ್ಮ ಪಕ್ಷದ ವರಿಷ್ಠರು ಮಾಡಲಿದ್ದಾರೆ. ಸದ್ಯಕ್ಕೆ ಈ ಕುರಿತು ಯಾವುದೇ ಚರ್ಚೆಗಳಾಗಿಲ್ಲ’ ಎಂದು ತಿಳಿಸಿದರು.

ತಗ್ಗಿದ ಮೋದಿ ಹವಾ

‘ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ, ಹವಾ ಈಗ ಕುಗ್ಗಿದೆ. ಅವರು ನೀಡಿದ ಭರವಸೆ, ಜನರ ನಿರೀಕ್ಷೆ ಹುಸಿಯಾಗಿದೆ. ಅವರ ಆಡಳಿತ ವೈಫಲ್ಯ ಈಗಾಗಲೇ ಜನರಿಗೆ ಚೆನ್ನಾಗಿ ಅರ್ಥವಾಗಿದೆ’ ಎಂದರು.

‘ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಅಖಂಡ ಕರ್ನಾಟಕದಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆಗೆ ಮಾಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.