
ಪ್ರಜಾವಾಣಿ ವಾರ್ತೆ
ತುಮಕೂರು: ‘ವಿಧಾನಸಭೆಯ ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಮೈತ್ರಿ ಅನಿವಾರ್ಯವಾಗಿದೆ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ’ ಎಂದು ಹೇಳಿದರು.
ವಾಪಸ್‌ಗೆ ಆಗ್ರಹ: ‘ಮೆಟ್ರೊ’ ಪ್ರಯಾಣ ದರ ಹೆಚ್ಚಳ ಸರಿಯಲ್ಲ. ಈಗಾಗಲೇ ಜನಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಹೆಚ್ಚಿಸಿರುವ ದರವನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.