ತುಮಕೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡುವ ಕಾಲಾವಕಾಶವನ್ನು ಏ. 30ರವರೆಗೆ ವಿಸ್ತರಿಸಲಾಗಿದ್ದು, ರೈತರು ನಿರಾತಂಕವಾಗಿ ರಾಗಿ ಮಾರಾಟ ಮಾಡಬಹುದಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡಲು ಈ ಅವಕಾಶ ಕಲ್ಪಿಸಿದೆ.
ಜಿಲ್ಲೆಯ ರೈತರು ಏ. 5ರವರೆಗೆ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಾಯಿತ ರೈತರಿಂದ ಮಾತ್ರ ರಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.