ತುಮಕೂರು: ನಗರ ಹೊರವಲಯದ ಅಕ್ಷಯ ಎಂಜಿನಿಯರಿಂಗ್ ಕಾಲೇಜು ಬಳಿ ಗುರುವಾರ ರಾತ್ರಿ ಖಾಸಗಿ ಆಂಬುಲೆನ್ಸ್ ಡಿಕ್ಕಿಯಾಗಿ ವೆಂಕಟಸ್ವಾಮಿ (65) ಎಂಬುವರು ಮೃತಪಟ್ಟಿದ್ದಾರೆ.
ಮೃತರು ತಾಲ್ಲೂಕಿನ ಕೋರ ಹೋಬಳಿ ಹೊಸಹಳ್ಳಿ ನಿವಾಸಿ. ಅಕ್ಷಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ರಸ್ತೆ ದಾಟುತ್ತಿದ್ದಾಗ ಕೊರಟಗೆರೆಯಿಂದ ನಗರದ ಕಡೆ ಬರುತ್ತಿದ್ದ ಆಂಬುಲೆನ್ಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.