ADVERTISEMENT

ಪಾವಗಡ: ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 17:42 IST
Last Updated 17 ಆಗಸ್ಟ್ 2020, 17:42 IST
ಪಾವಗಡದಲ್ಲಿ ಸೋಮವಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ವರದರಾಜು ಅವರಿಗೆ ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಪಾವಗಡದಲ್ಲಿ ಸೋಮವಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ವರದರಾಜು ಅವರಿಗೆ ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಪಾವಗಡ: ಭೂ ಸುಧಾರಣೆ ಕಾಯ್ದೆ ಸೇರಿದಂತೆ ರೈತರಿಗೆ ಮಾರಕವಾಗುವ ರೀತಿಯಲ್ಲಿ ಕಾಯ್ದೆಗಳಿಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ತಹಶೀಲ್ದಾರ್ ಕಚೇರಿವರೆಗೆ ಹಸಿರು ಸೇನೆ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ಅಂಬೇಡ್ಕರ್ ರೂಪಿಸಿರುವ ಸಂವಿಧಾನ, ಕಾಯ್ದೆಗಳಿಗೆ ರಾಜ್ಯ, ಕೇಂದ್ರ ಸರ್ಕಾರಗಳು ಮನ ಬಂದಂತೆ ತಿದ್ದುಪಡಿ ತರುತ್ತಿವೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತರುವ ಮುನ್ನ ರೈತ ಮುಖಂಡರು, ವಿರೋಧ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿಲ್ಲ. ಯಾವುದೇ ಚರ್ಚೆ ಮಾಡದೆ ಏಕಾಏಕಿ ತಿದ್ದುಪಡಿ ತಂದಿರುವುದು ಪ್ರಜಾಪ್ರಭುತ್ವ ವಿರೋಧಿ’ ಎಂದು ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಖಾಸಗೀಕರಣ ಮಾಡಲು ಸರ್ಕಾರ ಚಿಂತಿಸುತ್ತಿದೆ. ಇದರಿಂದ ರೈತರ ಮೇಲೆ ಹೊರೆ ಹೆಚ್ಚಲಿದೆ ಎಂದು ದೂರಿದರು.

ADVERTISEMENT

ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು. ರೈತ ಮುಖಂಡರಾದ ಪೂಜಾರಪ್ಪ, ಅಶ್ವಥಪ್ಪ, ಜಂಪಯ್ಯ, ಸದಾಶಿವಪ್ಪ, ನರಸಿಂಹಪ್ಪ, ಸಿದ್ದಪ್ಪ, ನಡುಪನ್ನ, ಹನುಮಂತರಾಯಪ್ಪ, ವೀರಭದ್ರಪ್ಪ, ಚಿತ್ತಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.