ADVERTISEMENT

ಬಹಿರಂಗಸಭೆಯಲ್ಲಿ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 15:18 IST
Last Updated 1 ನವೆಂಬರ್ 2020, 15:18 IST
ಶಿರಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನು ಆರೈಕೆ ಮಾಡುತ್ತಿರುವ ಕಾರ್ಯಕರ್ತರು.
ಶಿರಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನು ಆರೈಕೆ ಮಾಡುತ್ತಿರುವ ಕಾರ್ಯಕರ್ತರು.   

ತುಮಕೂರು: ಶಿರಾ ನಗರದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರಲ್ಲಿ ಭಾನುವಾರ ನಡೆದ ಜೆಡಿಎಸ್ ಬಹಿರಂಗ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಕುಸಿದು ಬಿದ್ದರು.

ದೇವೇಗೌಡರು ಮಾತನಾಡುತ್ತಿದ್ದಾಗ, ಅಮ್ಮಾಜಮ್ಮ ಅವರು ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದಲೂ ನಡೆದ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಅವರು ನಿಂತುಕೊಂಡಿದ್ದರು. ಇದರಿಂದ ಬಳಲಿದ್ದರು.
ತಕ್ಷಣ ಅವರನ್ನು ಶಾಸಕ ಡಾ. ಶ್ರೀನಿವಾಸಮೂರ್ತಿ ಆರೋಗ್ಯ ತಪಾಸಣೆ ನಡೆಸಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಮ್ಮಾಜಮ್ಮ ಅವರ ಪುತ್ರ ಸತ್ಯಪ್ರಕಾಶ್ ಈ ವೇಳೆ ಕಣ್ಣೀರಿಟ್ಟರು.

ಎಚ್‌.ಡಿ. ಕುಮಾರಸ್ವಾಮಿ ಸಂತೈಸಿದರು.

ADVERTISEMENT

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಮ್ಮಾಜಮ್ಮ ಸೆರಗೊಡ್ಡಿ, ನನಗೆ ರಾಜಕೀಯ ಗೊತ್ತಿಲ್ಲ. ರೈತರ ಕಷ್ಟ ತಿಳಿದಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಪತಿಯ ಕನಸಾಗಿತ್ತು. ಅದನ್ನು ನನಸು ಮಾಡಲು ಮತನೀಡಿ ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.