ADVERTISEMENT

ಗುಬ್ಬಿ: ತಾಳೇಕೊಪ್ಪದ ಆಂಜನೇಯ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 17 ಮೇ 2025, 15:05 IST
Last Updated 17 ಮೇ 2025, 15:05 IST
ಚೇಳೂರು ಹೋಬಳಿ ತಾಳೇಕೊಪ್ಪದ ಆಂಜನೇಯ ಬ್ರಹ್ಮ ರಥೋತ್ಸವವು ಅದ್ದೂರಿಯಾಗಿ ನೆರವೇರಿತು
ಚೇಳೂರು ಹೋಬಳಿ ತಾಳೇಕೊಪ್ಪದ ಆಂಜನೇಯ ಬ್ರಹ್ಮ ರಥೋತ್ಸವವು ಅದ್ದೂರಿಯಾಗಿ ನೆರವೇರಿತು   

ಗುಬ್ಬಿ: ತಾಲ್ಲೂಕಿನ ಚೇಳೂರು ಹೋಬಳಿ ತಾಳೇಕೊಪ್ಪದ ಆಂಜನೇಯ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬ್ರಹ್ಮರಥೋತ್ಸವ ನಡೆಯಿತು.

ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಸ್ವಾಮಿ ಮೂರ್ತಿಗೆ ಗರುಡ ಧ್ವಜ ಸ್ತಂಭನ, ಅಂಕುರಾರ್ಪಣೆ, ಅಷ್ಟಬಲಿ, ವೃತಿಕಾ ಪೂಜೆ, ವಿವಿಧ ಅಭಿಷೇಕ, ಅರ್ಚನೆಗಳನ್ನು ಮಾಡಿ ಸುಗಂಧ ಪುಷ್ಪಗಳ ಅಲಂಕಾರ ಮಾಡಲಾಗಿತ್ತು.

ಮಂಗಳ ವಾದ್ಯಗಳೊಂದಿಗೆ ಸ್ವಾಮಿಯ ಮೂರ್ತಿಯನ್ನು ತಂದು ಪುಷ್ಪಾಲಂಕೃತ ರಥದಲ್ಲಿ ಕೂರಿಸಲಾಯಿತು. ತೇವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹಾಗೂ ಗ್ರಾಮದ ಮುಖಂಡರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ADVERTISEMENT

ಮಾರಮ್ಮದೇವಿ ಆರತಿ ಉತ್ಸವ ಮಾಡಲಾಯಿತು. ಗ್ರಾಮಸ್ಥರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.