ADVERTISEMENT

ಹಾಗಲವಾಡಿ ಸಹಕಾರ ಸಂಘದ ವಾರ್ಷಿಕ ಸಭೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 3:35 IST
Last Updated 26 ಅಕ್ಟೋಬರ್ 2021, 3:35 IST
ಹಾಗಲವಾಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿದರು
ಹಾಗಲವಾಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿದರು   

ಹಾಗಲವಾಡಿ: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ತಾಲ್ಲೂಕಿನಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಸದಸ್ಯರ ಸಹಕಾರ ಅತ್ಯಗತ್ಯ’ ಎಂದು ಸಂಘದ ಅಧ್ಯಕ್ಷ ಎಚ್.ಎಸ್. ಜಯಪ್ರಕಾಶ್
ಹೇಳಿದರು.

ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಾಲಯದ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಹಿಂದಿಗಿಂತಲೂ ಇಂದು ಸಂಘ ಉತ್ತಮ ಪ್ರಗತಿ ಕಾಣುತ್ತಿದೆ. ಸಂಘದ ಪ್ರಗತಿಗೆ ಕಾರಣರಾದ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರಿಗೆ ಸಂಘ ಆಭಾರಿಯಾಗಿದೆ. ಹಾಗೆಯೇ ನಿಮ್ಮೆಲ್ಲರ ಅತ್ಯುನ್ನತ ಸಹಕಾರದಿಂದ ಅಭಿವೃದ್ಧಿ ಕಾಣುತ್ತಿದೆ ಎಂದರು.

ADVERTISEMENT

ಸಂಘದಲ್ಲಿ ವಿವಿಧ ರೀತಿಯ ಸಾಲ ನೀಡುತ್ತಿದ್ದು, ಸರಿಯಾಗಿ ವಸೂಲಾತಿಯೂ ಆಗುತ್ತಿದೆ. ಇನ್ನೂ ಹೆಚ್ಚು ಜನರಿಗೆ ಸೌಲಭ್ಯ ದೊರೆಯುತ್ತಿವೆ. ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡಿದ ಸಾಲ ಮರುಪಾವತಿ ಸರಿಯಾಗಿ ಆಗಿರುವುದರಿಂದ ಈ ವರ್ಷದಿಂದ ₹ 10 ಲಕ್ಷದವರೆಗೆ ಸಾಲ ನೀಡಲು ಸಭೆ ಅನುಮೋದನೆ ನೀಡಿದೆ. ಷೇರು ಹಣವನ್ನು ₹ 500ಕ್ಕೆ ಹೆಚ್ಚಿಸಲು ಅನುಮೋದಿಸಲಾಗಿದೆ ಎಂದು ಹೇಳಿದರು.

ಸದಸ್ಯರು ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಾಲ ಪಡೆದವರು ಸಕಾಲದಲ್ಲಿ ಮರುಪಾವತಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಗಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಿ. ಯರ್ರಯ್ಯ, ಸದಸ್ಯರಾದ ಎಚ್.ಸಿ. ಭಕ್ತಯ್ಯ, ಎಚ್.ಬಿ. ಗಂಗಾಧರಯ್ಯ, ಎಸ್. ದಯಾನಂದ್, ಎಚ್.ಬಿ. ಮಹೇಶ್, ಚಿತ್ರಲಿಂಗಯ್ಯ, ಕರಿಬಸಮ್ಮ, ಎಚ್.ಆರ್. ಕೆಂಪರಾಜು, ಎಚ್.ಆರ್. ಹೊನ್ನಪ್ಪ, ಕಾರ್ಯ ನಿರ್ವಹಣಾಧಿಕಾರಿ ತಿಪ್ಪೇಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.