ADVERTISEMENT

ಪಡಿತರ ಇ–ಕೆವೈಸಿ ಮಾಡಿಸಲು ಮತ್ತೊಮ್ಮೆ ಅವಕಾಶ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 4:25 IST
Last Updated 30 ಸೆಪ್ಟೆಂಬರ್ 2021, 4:25 IST

ತುಮಕೂರು: ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ– ಕೆವೈಸಿ (ಬೆರಳಚ್ಚು ನೀಡುವುದು) ಮಾಡಿಸಲು ಅ. 10ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಪಡಿತರ ಚೀಟಿದಾರರು ಕಡ್ಡಾಯವಾಗಿ ಗಡುವಿನೊಳಗೆ ಇ–ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ
ತಿಳಿಸಿದ್ದಾರೆ.

ಇ–ಕೆವೈಸಿ ಆಗದ ಪಡಿತರ ಚೀಟಿಯಲ್ಲಿರುವ ಸದಸ್ಯರ ವಿವರ ಈಗಾಗಲೇ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿದ್ದು, ಇ–ಕೆವೈಸಿ ಮಾಡಿಸದ ಸದಸ್ಯರು ಪಡಿತರ ಪಡೆದುಕೊಳ್ಳುತ್ತಿರುವ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಬಯೊಮೆಟ್ರಿಕ್ ನೀಡಬೇಕು ಎಂದು ತಿಳಿಸಿದ್ದಾರೆ.

ಕೆವೈಸಿಯನ್ನು ಉಚಿತವಾಗಿ ಮಾಡಲಾಗುತ್ತಿದ್ದು, ಪಡಿತರದಾರರು ಹಣ ನೀಡುವಂತಿಲ್ಲ. ಇ–ಕೆವೈಸಿ ಮಾಡಿಸದ ಪಡಿತರ ಚೀಟಿಯಲ್ಲಿರುವ ಸದಸ್ಯರಿಗೆ ಪಡಿತರ ನಿಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.