ತುಮಕೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯಡಿ 2021-22ನೇ ಸಾಲಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಠ ₹ 3 ಲಕ್ಷದವರೆಗೆ ಸಾಲ ನೀಡಿದ್ದಲ್ಲಿ ನಿಗಮದಿಂದ ಗರಿಷ್ಠ ₹1.50 ಲಕ್ಷ ಅಥವಾ ಸಾಲದ ಮೊತ್ತದಲ್ಲಿ ಶೇ 50ರಷ್ಟು ಸಹಾಯಧನ ನೀಡಲಾಗುವುದು.
ಅ. 18ರ ಒಳಗಾಗಿ18ರಿಂದ 55 ವರ್ಷದ ಮಹಿಳೆಯರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬಹುದು. ತುಮಕೂರು ನಗರ 0816-2272204, ತುಮಕೂರು (ಗ್ರಾ) 0816-2285021, ಚಿಕ್ಕನಾಯಕನಹಳ್ಳಿ 08133-268245, ಗುಬ್ಬಿ 08131-223731, ಕೊರಟಗೆರೆ 08138-232315, ಕುಣಿಗಲ್ 08132-222691, ಮಧುಗಿರಿ 08137-282452, ಶಿರಾ 08135-277578, ಪಾವಗಡ 08136-245733, ತುರುವೇಕೆರೆ 08139-288468, ತಿಪಟೂರು 08134-252991 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.