ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದ ಮಕ್ಕಳ ಹಕ್ಕುಗಳ ಕಾರ್ಯಕರ್ತ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಕೆ.ಟಿ. ಅವರನ್ನು ರಾಜ್ಯಮಟ್ಟದ ಬಾಲ ನ್ಯಾಯ ಮಂಡಳಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರನ್ನಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸರ್ಕಾರ ನೇಮಕ ಮಾಡಿದೆ.
ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ವಿಜಯ ಕುಮಾರ್ ಬಿ., ರಾಜೇಂದ್ರ ಕೆ.ಎಂ., ಮಧುಬಂತಿ ಸಂಧ್ಯ, ತಿಪ್ಪೇಸ್ವಾಮಿ ಕೆ.ಟಿ ಅವರು ಸದಸ್ಯರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.