ADVERTISEMENT

ತುಮಕೂರು: ಮಾರ್ಗಸೂಚಿ ಉಲ್ಲಂಘಿಸಿದರೆ ಬಂಧನ

ಬಂದೋಬಸ್ತ್‌ಗೆ 700ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 16:20 IST
Last Updated 27 ಸೆಪ್ಟೆಂಬರ್ 2020, 16:20 IST
ಡಾ.ಕೆ.ವಂಶಿಕೃಷ್ಣ
ಡಾ.ಕೆ.ವಂಶಿಕೃಷ್ಣ   

ತುಮಕೂರು: ಬಂದ್ ಪ್ರಯುಕ್ತ ಜಿಲ್ಲೆಯಾದ್ಯಂತ 700ಕ್ಕೂ ಹೆಚ್ಚು ಪೊಲೀಸರು, 3 ಕೆಎಸ್‌ಆರ್‌ಪಿ ತುಕಡಿ ಹಾಗೂ ಡಿಆರ್‌ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. ಸರ್ಕಾರ ಮತ್ತು ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಪ್ರತಿಭಟನಕಾರರನ್ನು ಬಂಧಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಎಚ್ಚರಿಸಿದ್ದಾರೆ.

ಪ್ರತಿಭಟನೆ ಅವಕಾಶ ನೀಡುವಂತೆ ಎಲ್ಲ ತಾಲ್ಲೂಕು ಕೇಂದ್ರಗಳಿಂದಲೂ ಮನವಿ ಬಂದಿದೆ. ಡಿವೈಎಸ್‌ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ನಾನು ವಿವಿಧ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ್ದೇವೆ. ಬಂದ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಹೈಕೋರ್ಟ್ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದ್ದೇವೆ. ಅವರು ಸಹ ಇದಕ್ಕೆ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನ ರೀತಿ ಸಂಚರಿಸುತ್ತವೆ. ಬಸ್‌ಗಳ ಓಡಾಟಕ್ಕೆ ಅಡಚಣೆ ಮಾಡಬಾರದು. ಹೆದ್ದಾರಿ ತಡೆಗೂ ಮುಂದಾಗಬಾರದು. ಯಾವುದೇ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಬಾರದು. ಶಾಂತಿಯುತವಾಗಿ ಪ್ರತಭಟನೆ ನಡೆಸಿ ತಹಶೀಲ್ದಾರ್, ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.