
ಪ್ರಜಾವಾಣಿ ವಾರ್ತೆತುಮಕೂರು: ತಾಲ್ಲೂಕಿನ ಕುಚ್ಚಂಗಿ ಕೆರೆ ಅಂಗಳದಲ್ಲಿ ಕಾರು ಸಹಿತ ಬೆಳ್ತಂಗಡಿ ತಾಲ್ಲೂಕಿನ ಮೂವರನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂಧನ್ (24), ಸಂತೇಪೇಟೆಯ ನವೀನ್ (24), ವೆಂಕಟೇಶಪುರದ ಕೃಷ್ಣ (22), ಹೊಂಬಯ್ಯನಪಾಳ್ಯದ ಗಣೇಶ (19), ನಾಗಣ್ಣನಪಾಳ್ಯದ ಕಿರಣ್ (23), ಕಾಳಿದಾಸ ನಗರದ ಸೈಮನ್ (18) ಎಂಬುವರು ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯ ತೀತಾ ಜಲಾಶಯದ ಬಳಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಪ್ರಮುಖ ಆರೋಪಿಗಳಾದ ನಗರದ ಶಿರಾಗೇಟ್ ನಿವಾಸಿ ಪಾತರಾಜು (ರಾಜಗುರು) (35), ಸತ್ಯಮಂಗಲ ಗ್ರಾಮದ ಗಂಗರಾಜು (35) ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.