ಕುಣಿಗಲ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಸಿಬ್ಬಂದಿ ಆತನಿಂದ 9 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅವಿನಾಶ ಬಂಧಿತ.
ಪಟ್ಟಣದ ಮಲ್ಲಾಘಟ್ಟದ ಸಂತು ಡಾಬಾ ಬಳಿ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂದಿಸಿದ್ದಾರೆ.
ದಾಳಿಯಲ್ಲಿ ಸಿಬ್ಬಂದಿಯಾದ ಮಲ್ಲಿಕಾರ್ಜುನಯ್ಯ, ಶಿವರಾಂ, ಗಂಗಾಧರಯ್ಯ, ವೈಜುನಾಥ್ ಮಲ್ಲಾಘಣ, ಮಂಜುನಾಥ್, ತಿರುಮಲೆಗೌಡ, ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.