ADVERTISEMENT

ಮಾತುಕತೆಗೆ ಆಹ್ವಾನಿಸದ ಸರ್ಕಾರ: ಆಶಾ ಕಾರ್ಯಕರ್ತೆಯರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 17:21 IST
Last Updated 20 ಜುಲೈ 2020, 17:21 IST

ತುಮಕೂರು: ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತುಕತೆಗೆ ಆಹ್ವಾನಿಸದಿರುವುದಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಅಸಮಾಧಾನ ವ್ಯಕ್ತಪಡಿಸಿದೆ.

ದುಡಿಯುವ ವರ್ಗದ ಜನರ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಸಂಘದೊಂದಿಗೆ ಸರ್ಕಾರ ಮಾತುಕತೆ ನಡೆಸಬೇಕು ಎಂದು ಸಂಘಟನೆ ಜಿಲ್ಲಾ ಸಂಚಾಲಕಿ ಮಂಜುಳಾ ಗೋನವಾರ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮಾಸಿಕ ಗೌರವಧನ ₹ 10,000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದ್ದೆವು. ಸರ್ಕಾರ ಭರವಸೆ ನೀಡಿತೇ ಹೊರತು ಈಡೇರಿಸಲಿಲ್ಲ. ಕಾರ್ಯಕರ್ತೆಯರ ಚಟುವಟಿಕೆಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಲು ಇರುವ ಲೋಪಗಳನ್ನು ಸರಿಪಡಿಸುವ ಹೆಸರಿನಲ್ಲಿ ವಿಳಂಬ ಅನುಸರಿಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.