ತುಮಕೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವ ಧನ ಖಾತರಿಪಡಿಸಬೇಕು, ಕೊರೊನಾ ವಿರುದ್ಧದ ಕೆಲಸಕ್ಕೆ ಅಗತ್ಯವಿರುವಷ್ಟು ರಕ್ಷಣಾ ಸಾಮಗ್ರಿ ನೀಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊರೊನಾ ವಾರಿಯರ್ಸ್ ಪ್ಯಾಕೇಜ್ ₹2 ಸಾವಿರ ಮತ್ತು ₹ 3 ಸಾವಿರವನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಜುಲೈ 10ರಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಲು ಮುಂದಾಗಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂನ್ 30ರಂದು ರಾಜ್ಯದಾದ್ಯಂತ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಬೇಡಿಕೆಗಳು ಈಡೇರಿಸದ ಹಿನ್ನೆಲೆಯಲ್ಲಿ ಸೇವೆ ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸಲಾಗಿದೆ ಎಂದು ಸಂಘಟನೆ ಮುಖಂಡರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.