ತುಮಕೂರು: ನಗರದ ವಿದ್ಯಾನಿಧಿ ಕಾಲೇಜು ಬಳಿ ಈಚೆಗೆ ಹುಡುಗಿ ವಿಚಾರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಯ ದೃಶ್ಯ ಹತ್ತಿರದ ಸಿ.ಸಿ ಟಿ.ಟಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಎನ್.ವಿ.ಮನೋಜ್, ಗಣೇಶ್ ಇತರೆ ಮೂವರು ಹಲ್ಲೆ ಮಾಡಿದ್ದಾರೆ. ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿಯನ್ನು ಮನೋಜ್ ಪ್ರೀತಿಸುತ್ತಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿ ಅದೇ ಹುಡುಗಿ ಜತೆ ಮಾತನಾಡುತ್ತಿದ್ದ. ಈ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಬಸ್ ಚಾಲಕರು, ಉಪನ್ಯಾಸಕರು ಜಗಳ ಬಿಡಿಸಿದ್ದಾರೆ.
‘ಬಸ್ ಹತ್ತುವ ಸಮಯದಲ್ಲಿ ಏಕಾಏಕಿ ನನ್ನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ಒದ್ದು, ಜಾತಿನಿಂದನೆ ಮಾಡಿ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಕೊಲೆ ಬೆದರಿಕೆ ಹಾಕಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ’ ಕಾನೂನು ಸಂಘರ್ಷಕ್ಕೆ ಒಳಗಾದ ವಿದ್ಯಾರ್ಥಿ ಎನ್‌ಇಪಿಎಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.