ADVERTISEMENT

ಪತ್ರಕರ್ತರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 20:02 IST
Last Updated 13 ಜೂನ್ 2019, 20:02 IST
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪತ್ರಕರ್ತರು, ಛಾಯಾಗ್ರಾಹಕರು ಬುಧವಾರ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪತ್ರಕರ್ತರು, ಛಾಯಾಗ್ರಾಹಕರು ಬುಧವಾರ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ತುಮಕೂರು: ಕೈಗಾರಿಕೆಗಳಿಂದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಮೇಲೆ ಆಗುತ್ತಿರುವ ಸಮಸ್ಯೆಗಳ ಕುರಿತು ವರದಿ ಮಾಡಲು ಹೋಗಿದ್ದ ವೇಳೆ ಬೇಳೂರು ಬಾಯರ್ಸ್ ಕಂಪನಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪತ್ರಕರ್ತರು ಮತ್ತು ಛಾಯಾಗ್ರಾಹಕರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪತ್ರಕರ್ತರು, ಛಾಯಾಗ್ರಾಹಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

ಹಲ್ಲೆ ನಡೆಸಿದ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್, ಪದಾಧಿಕಾರಿಗಳಾದ ಎಚ್.ಟಿ.ಚಂದ್ರಶೇಖರ್, ಬರಗೂರು ವಿರೂಪಾಕ್ಷ, ಎನ್.ಎಸ್. ಮಾರುತಿ ಪ್ರಸಾದ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.