ಶಿರಾ: ರಾಷ್ಟ್ರೀಯ ಹೆದ್ದಾರಿ - 48ರ ಕಾಮತ್ ಹೋಟೆಲ್ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ಏಸ್ ವಾಹನ ಕಾಮತ್ ಹೋಟೆಲ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಹೋಗಿ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್‌ನಲ್ಲಿದ್ದ ಹೊಸಪೇಟೆ ಪಟ್ಟಣದ ವೆಂಕಟೇಶ್ (55) ಹಾಗೂ ರುಕ್ಮಿಣಿ (45) ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಮಣ್ಣ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.