ADVERTISEMENT

6 ಸಾವಿರ ರೈತರಿಂದ ವಿಧಾನಸೌಧ ಮುತ್ತಿಗೆಗೆ ನಿರ್ಧಾರ: ಶಾಸಕ ಬಿ.ಸುರೇಶ್‌ಗೌಡ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 5:31 IST
Last Updated 8 ಆಗಸ್ಟ್ 2025, 5:31 IST
<div class="paragraphs"><p>ತುಮಕೂರಿನಲ್ಲಿ ಗುರುವಾರ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಶಾಸಕ ಬಿ.ಸುರೇಶ್‌ಗೌಡ ನೇತೃತ್ವದಲ್ಲಿ ನಡೆಯಿತು. ತಹಶೀಲ್ದಾರ್ ರಾಜೇಶ್ವರಿ, ಸಮಿತಿ ಸದಸ್ಯರಾದ ಕರೆರಂಗಯ್ಯ, ಶಿವರಾಜು, ರೂಪ ಮೋಹನ್ ಭಾಗವಹಿಸಿದ್ದರು</p></div>

ತುಮಕೂರಿನಲ್ಲಿ ಗುರುವಾರ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಶಾಸಕ ಬಿ.ಸುರೇಶ್‌ಗೌಡ ನೇತೃತ್ವದಲ್ಲಿ ನಡೆಯಿತು. ತಹಶೀಲ್ದಾರ್ ರಾಜೇಶ್ವರಿ, ಸಮಿತಿ ಸದಸ್ಯರಾದ ಕರೆರಂಗಯ್ಯ, ಶಿವರಾಜು, ರೂಪ ಮೋಹನ್ ಭಾಗವಹಿಸಿದ್ದರು

   

ತುಮಕೂರು: ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ವಜಾ ಮಾಡಿರುವುದನ್ನು ವಿರೋಧಿಸಿ 6 ಸಾವಿರ ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ.ಸುರೇಶ್‌ಗೌಡ ಹೇಳಿದರು.

ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದ ನಂತರ ಮಾತನಾಡಿದರು.

ADVERTISEMENT

ತಾಲ್ಲೂಕಿನಲ್ಲಿ ಫಾರಂ 57ರಲ್ಲಿ 6 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಕೇವಲ 27 ಅರ್ಜಿಗಳು ಮಾತ್ರ ಸಾಗುವಳಿ ಚೀಟಿ ನೀಡಲು ಅರ್ಹವಾಗಿವೆ. ಉಳಿದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ತಹಶೀಲ್ದಾರ್ ಸಭೆಗೆ ಮಾಹಿತಿ ನೀಡಿದ್ದಾರೆ. ತಿರಸ್ಕೃತ ಅರ್ಜಿದಾರರೊಂದಿಗೆ ವಿಧಾನ ಮಂಡಲದ ಅಧಿವೇಶನದ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ಕಳೆದ ಎರಡು– ಮೂರು ದಶಕಗಳಿಂದ ಜಮೀನು ಉಳುಮೆ ಮಾಡುತ್ತಿದ್ದು, ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅನುಭವದಲ್ಲಿರುವ ರೈತರಿಗೆ ಜಿಲ್ಲಾಧಿಕಾರಿ ಸಾಗುವಳಿ ಚೀಟಿ ನೀಡದೆ, ಅರ್ಜಿ ತಿರಸ್ಕರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2008- 2013ರಲ್ಲಿ ಶಾಸಕನಾಗಿದ್ದ ಅವಧಿಯಲ್ಲಿ ನೀಡಿರುವಂತಹ ಸಾಗುವಳಿ ಚೀಟಿಗಳಿಗೆ ಈವರೆಗೂ ಖಾತೆ ಮಾಡಿಕೊಟ್ಟಿಲ್ಲ. ಪ್ರತಿನಿತ್ಯ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಕೈಕಟ್ಟಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಗೆ ಗೈರಾಗಿದ್ದ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲು ತಹಶೀಲ್ದಾರ್‌ಗೆ ನಿರ್ದೇಶಿಸಿದರು.

ಸಭೆಯಲ್ಲಿ ಸದಸ್ಯರಾದ ಕರೆರಂಗಯ್ಯ, ಶಿವರಾಜು, ರೂಪ ಮೋಹನ್, ತಹಶೀಲ್ದಾರ್ ರಾಜೇಶ್ವರಿ, ಸಣ್ಣಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.