ಕುಣಿಗಲ್: ನರೇಗಾ ಯೋಜನೆಯಡಿ ಅಪೂರ್ಣಗೊಂಡ ಕಾಮಗಾರಿಗಳಿಗೆ ಬಿಲ್ ಪಾವತಿಸುವಂತೆ ಶಿಫಾರಸು ಮಾಡಿರುವುದು ಸೇರಿದಂತೆ ಇನ್ನಿತರ ಯೋಜನೆಗಳ ಅನುಷ್ಠಾನದಲ್ಲಿ ಲೋಪವೆಸಗಿದ ಆರೋಪದಲ್ಲಿ ತಾಲ್ಲೂಕಿನ ಕೊತ್ತಗೆರೆ ಹೋಬಳಿ ಪಿಡಿಒ ಸರಿತಾ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
ಪಿಡಿಒ ಸರಿತಾ ಬಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸದೆ ಅಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಶಿಫಾರಸು ನೀಡಿದ್ದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಲೋಪ ಎಸಗಿರುವುದು ಕಂಡು ಬಂದಿದೆ
ಈ ಬಗ್ಗೆ ದೂರು ಬಂದಿದ್ದರಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ನಾರಾಯಣ್, ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ನೀಡಿದ ವರದಿ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.