ಮಧುಗಿರಿ: ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ತಂಡಗಳು ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವು.
ತುಮಕೂರು ಜಿಲ್ಲೆ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್, ಮಧುಗಿರಿ ಸ್ಪೋರ್ಟ್ಸ್ ಕ್ಲಬ್‌ನಿಂದ ನಡೆದ ರಾಜ್ಯ ಮಟ್ಟದ 19 ವರ್ಷ ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ರಾಜ್ಯದ ವಿವಿಧ ಭಾಗಗಳಿಂದ 24 ಬಾಲಕರ ತಂಡ ಹಾಗೂ 15 ಬಾಲಕಿಯರ ತಂಡಗಳು ಭಾಗವಹಿಸಿದ್ದವು.
ಬೆಂಗಳೂರು ರಾಜರಾಜೇಶ್ವರಿ ಬಾಲಕರ ತಂಡ, ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಬಾಲಕಿಯರ ‘ಎ’ ತಂಡ ದ್ವಿತೀಯ, ಹಾಸನ ಸಿಸಿಸಿ ಬಾಲಕರ ತಂಡ ಹಾಗೂ ಬೆಂಗಳೂರು ರಾಜರಾಜೇಶ್ವರಿ ಯೂಥ್ ಕ್ಲಬ್ ತೃತೀಯ ಸ್ಥಾನ ಪಡೆದವು.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಎನ್.ಗಂಗಣ್ಣ, ಪುರಸಭೆ ಸದಸ್ಯ ಎಂ.ಶ್ರೀಧರ್, ಮಧುಗಿರಿ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಸೋಮಶೇಖರ್, ಅಧ್ಯಕ್ಷ ನರೇಂದ್ರ, ಪ್ರಧಾನ ಕಾರ್ಯದರ್ಶಿ ಎಸ್. ಸುಧಾಕರ್, ರಾಘವೇಂದ್ರ ಆಸ್ಪತ್ರೆಯ ಕಾರ್ಯದರ್ಶಿ ಜಿ.ಕೆ.ಜಯರಾಮ್ ಹಾಗೂ ಕ್ಲಬ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.