ADVERTISEMENT

ಅ.6ರವರೆಗೂ ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ರೈಲು ಸಂಚಾರ ರದ್ದು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 10:22 IST
Last Updated 20 ಸೆಪ್ಟೆಂಬರ್ 2019, 10:22 IST
   

ಮೈಸೂರು: ಮೈಸೂರು–ಬಾಗಲಕೋಟೆ–ಮೈಸೂರು ನಡುವೆ ನಿತ್ಯ ಸಂಚರಿಸುವ ಬಸವ ಎಕ್ಸ್‌ಪ್ರೆಸ್‌ ರೈಲು ಸಂಚಾರ ಅ.6ರವರೆಗೂ ಸಂಪೂರ್ಣ ಸ್ಥಗಿತಗೊಳ್ಳಲಿದೆ.

ಸೆಂಟ್ರಲ್ ರೈಲ್ವೆಯ ಸೊಲ್ಲಾಪುರ ವಿಭಾಗದಲ್ಲಿ ದ್ವಿಪಥ ಹಳಿ ಜೋಡಣೆ ಸಲುವಾಗಿ ಹಾಗೂ ಸೊಲ್ಲಾಪುರ-ವಾಡಿ ವಿಭಾಗದ ಕಲಬುರ್ಗಿ–ಸವಲ್ಗಿ ರೈಲ್ವೆ ನಿಲ್ದಾಣಗಳ ನಡುವೆ ಇಂಟರ್ ಲಾಕಿಂಗ್ ಕೆಲಸ ನಡೆದಿರುವುದರಿಂದ ಬಸವ ಎಕ್ಸ್‌ಪ್ರೆಸ್‌ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT