ADVERTISEMENT

ಬಿತ್ತನೆ ಬೀಜ, ಗೊಬ್ಬರಕ್ಕೆ ಕೊರತೆಯಿಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2020, 14:19 IST
Last Updated 22 ಏಪ್ರಿಲ್ 2020, 14:19 IST
ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್   

ತುಮಕೂರು: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜಗಳು, ಗೊಬ್ಬರ, ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆ ಮತ್ತು ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬುಧವಾರ ತಿಳಿಸಿದರು.

ಕೃಷಿ ಮತ್ತು ತೋಟಗಾರಿಕಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ‘ರೈತರಿಗೆ ಗುಣಮಟ್ಟದ ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕ ಪೂರೈಸಲು ಶ್ರಮಿಸಲಾಗುತ್ತಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್, ಕಲ್ಲಂಗಡಿ ಬೆಳೆಯಲಾಗುತ್ತಿದೆ. ಇವು ಸಮರ್ಪಕವಾಗಿ ಮಾರಾಟವಾಗದೆ ಕೊಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನೆಯ ಘಟಕ ಸ್ಥಾಪನೆಗೆ ಉದ್ದೇಶಿಸಲಾಗಿದೆ’ ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನ, ‘ಪೂರ್ವ ಮುಂಗಾರು ಬಿತ್ತನೆಗೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಬಿತ್ತನೆ ಬೀಜ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಕೃಷಿ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದವರಿಗೆ ಮಾಸ್ಕ್ ನೀಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು, ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ರೈತರ ಬೆಳೆಗಳನ್ನು ಮಧ್ಯವರ್ತಿಗಳು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದಾರೆ. ಕೇರಳ ಮಾದರಿಯಲ್ಲಿ ರೈತರಿಂದ ನೇರವಾಗಿ ಬೆಳೆ ಖರೀದಿಸಿ ಅವುಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.