ADVERTISEMENT

ಒಂಟಿ ಸಲಗ: ಎಚ್ಚರ ವಹಿಸಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 9:12 IST
Last Updated 25 ಫೆಬ್ರುವರಿ 2020, 9:12 IST

ತುಮಕೂರು: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ವಲಯದಿಂದ ತುಮಕೂರು ಜಿಲ್ಲೆಗೆ ಪ್ರವೇಶಿಸುರವ ಒಂಟಿ ಸಲಗ ಸೋಮವಾರ(ಫೆ.24) ರಂದು ತಾಲ್ಲೂಕಿನ ಹೆಬ್ಬೂರು ಹೋಬಳಿ, ಕೆಂಬಳಲು ಗ್ರಾಮದ ಕೆರೆಯಲ್ಲಿ ಕಂಡು ಬಂದಿದೆ.

ಈ ಸಲಗವು ಗುಬ್ಬಿ, ತುಮಕೂರು, ಕುಣಿಗಲ್ ತಾಲ್ಲೂಕುಗಳಿಗೆ ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಹೊಲಗದ್ದೆ, ತೋಟಗಳಿಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಮನವಿ ಮಾಡಿದ್ದಾರೆ.

ಈಗಾಗಲೇ ಸಲಗವನ್ನು ಜಿಲ್ಲೆಯಿಂದ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆಯಿಂದ ಅಗತ್ಯ ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.