ADVERTISEMENT

ಪಾವಗಡ: ಮನೆಗೆ ಬಂದ ಕರಡಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 5:10 IST
Last Updated 3 ಆಗಸ್ಟ್ 2022, 5:10 IST
   

ತುಮಕೂರು: ಪಾವಗಡ ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಕರಡಿಯೊಂದು ರಾತ್ರಿ ಕಳೆದಿದೆ.

ನಿರಂತರವಾಗಿ ಮಳೆ ಸುರಿಯುತ್ತಿದ್ದರಿಂದ. ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ. ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT