ADVERTISEMENT

ಮಧುಗಿರಿ |ಕರಡಿ ಪ್ರತ್ಯಕ್ಷ: ಗ್ರಾಮಸ್ಥರ ಆತಂಕ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 14:24 IST
Last Updated 18 ಡಿಸೆಂಬರ್ 2023, 14:24 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಮಧುಗಿರಿ: ತಾಲ್ಲೂಕಿನ ಪುಲಮಾಚಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಗ್ರಾಮದ ಶ್ರೀರಾಮಯ್ಯ ಎಂಬವರ ಮನೆ ಮುಂಭಾಗ ರಸ್ತೆಯಲ್ಲಿ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಕರಡಿ ಓಡುತ್ತಿರುವುದನ್ನು ಯುವಕರು ಮೊಬೈಲ್‌ನಲ್ಲಿ ಸೆರೆಹಿಡಿದು, ವಲಯ ಅರಣ್ಯ ಅಧಿಕಾರಿ ಸುರೇಶ್ ಗಮನಕ್ಕೆ ತಂದಿದ್ದಾರೆ.

ADVERTISEMENT

ಹಾಡುಹಗಲೇ ಕರಡಿಗಳು ರಸ್ತೆಯಲ್ಲಿ ಓಡಾಟ ನಡೆಸುತ್ತಿರುವುದರಿಂದ ಮಕ್ಕಳು, ವೃದ್ಧರು ಮನೆಯಿಂದ ಹೊರ ಬರಲು ಆತಂಕಪಡುವಂತಾಗಿದೆ. ಕರಡಿಗಳಿಗೆ ಆಹಾರ ಸಿಗದೇ ಇರುವುದರಿಂದ ಗ್ರಾಮಗಳತ್ತ ಮುಖ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದರು.

ಈ ಭಾಗದಲ್ಲಿ ಕರಡಿಗಳ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆಯವರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.