ಕುಣಿಗಲ್: ಬೆಂಗಳೂರಿನ ರೇಸ್‌ಕೋರ್ಸ್ ಅನ್ನು ಕುಣಿಗಲ್ ಸ್ಟಡ್‌ಫಾರಂಗೆ ಸ್ಥಳಾಂತರಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ತಿಳಿಸಿದರು.
ಬುಧವಾರ ಕುಣಿಗಲ್ ಸ್ಟಡ್‌ಫಾರಂಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುದುರೆ ಫಾರಂ ಜಾಗತಿಕ ಟೆಂಡರ್ ಮೂಲಕ ಪೂನಾವಾಲ ಕಂಪನಿಗೆ ಆಗಿದ್ದರೂ ತಾಂತ್ರಿಕ ಕಾರಣದಿಂದ ರದ್ದಾಗಿತ್ತು. ಮತ್ತೆ ಟೆಂಡರ್ ನಡೆದಿಲ್ಲ. ಮುಂದೇನು ಮಾಡಬೇಕು ಎಂಬ ವಿಷಯ ಇನ್ನೂ ನಿರ್ಧಾರವಾಗಿಲ್ಲವಾದರೂ ಸ್ಥಳಾಂತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಈಗಾಗಲೇ ಬೆಂಗಳೂರು ಟರ್ಫ್ ಕ್ಲಬ್ ಪರಿಶೀಲನೆ ನಡೆಸಿದ್ದು ಇನ್ನೂ ಪ್ರಕ್ರಿಯೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.